ವಿಪ್
👉🌹 ರಾಜೀನಾಮೆ ಕೊಟ್ಟವರಿಗೆ ವಿಪ್ ಅನ್ವಯಿಸದು: ತಜ್ಞರು
==================
ವಿಶ್ವಾಸಮತ ಸಾಬೀತುಪಡಿಸುವ ಸನ್ನಿವೇಶ ಸೃಷ್ಟಿಯಾದರೆ ಶಾಸಕರಿಗೆ ವಿಪ್ ಜಾರಿ ಮಾಡುವ ಅವಕಾಶ ಇಲ್ಲ ಹಾಗೂ ಸರ್ಕಾರ ಅಲ್ಪಮತದತ್ತ ಸಾಗಿರುವುದರಿಂದ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಹೋಗುವ ದಾರಿಯೂ ಇಲ್ಲ ಎಂಬುದು ಕಾನೂನು ತಜ್ಞರ ಅಭಿಮತ.
==================
🌹 ಈ ವಿಪ್ ಎಂದರೇನು.?
=================
ವಿಪ್ ಎಂಬುದು ಪಕ್ಷಗಳು ತಮ್ಮ ಜನಪ್ರತಿನಿಧಿಗಳಿಗೆ ನೀಡುವ ಸೂಚನೆಯಾಗಿದೆ. ರಾಜ್ಯಸಭಾ ಚುನಾವಣೆ, ಪರಿಷತ್ ಚುನಾವಣೆ, ಅವಿಶ್ವಾಸ ನಿರ್ಣಯ ಮೊದಲಾದ ಸಂದರ್ಭಗಳಲ್ಲಿ ಮತದಾನ ಪ್ರಕ್ರಿಯೆಯನ್ನು ಪಾಲ್ಗೊಳ್ಳಲು ತಮ್ಮ ಜನಪ್ರತಿನಿಧಿಗಳಿಗೆ ಪಕ್ಷಗಳು ವಿಪ್ ಜಾರಿ ಮಾಡುತ್ತವೆ.ವಿಪ್ನಲ್ಲಿ ಸಿಂಗಲ್ ಲೈನ್, ಡಬಲ್ ಲೈನ್ ಮತ್ತು ಥ್ರೀ ಲೈನ್ ವಿಪ್ಗಳೆಂಬ ಮೂರು ವಿಧಗಳಿವೆ. ಸಿಂಗಲ್ ಲೈನ್ ವಿಪ್ನಲ್ಲಿ ಮತದಾನದ ದಿನಾಂಕ ಮೊದಲಾದ ವಿವರವನ್ನು ನೋಟೀಸ್ ಮೂಲಕ ನೀಡಲಾಗುತ್ತದೆ. ಇದರಲ್ಲಿ ಜನಪ್ರತಿನಿಧಿಗಳು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವುದು ಕಡ್ಡಾಯವೇನೂ ಇರುವುದಿಲ್ಲ. ಡಬಲ್ ಲೈನ್ ವಿಪ್ನಲ್ಲಿ ಮತದಾನ ಮಾಡಲು ಪಕ್ಷವು ಸ್ವಲ್ಪಮಟ್ಟಿಗೆ ಕಡ್ಡಾಯ ಮಾಡಿರುತ್ತದೆ. ಸರಿಯಾದ ಕಾರಣ ಕೊಟ್ಟು ಮತದಾನದಿಂದ ದೂರು ಉಳಿಯುವ ಸ್ವಾತಂತ್ರ್ಯವನ್ನ ಕೊಟ್ಟಿರಲಾಗುತ್ತದೆ. ಇನ್ನು, ಮೂರನೇಯದಾದ ಥ್ರೀಲೈನ್ ವಿಪ್ನಲ್ಲಿ ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಕಟ್ಟುನಿಟ್ಟಿನ ಸೂಚನೆ ಕೊಟ್ಟಿರಲಾಗುತ್ತದೆ. ಥ್ರೀಲೈನ್ ವಿಪ್ ಪಡೆದವರು ಮತದಾನ ಮಾಡಲಿಲ್ಲವೆಂದರೆ ಪಕ್ಷದಿಂದಲೇ ಅಮಾನತಾಗುವ ಸಾಧ್ಯತೆ ಇರುತ್ತದೆ. ಪಕ್ಷಗಳು ಕೊಡುವ ವಿಪ್ ಸಾಮಾನ್ಯವಾಗಿ ಥ್ರೀ ಲೈನ್ ವಿಪ್ ಆಗಿರುತ್ತದೆ.
=================
Comments